ಮಂಡ್ಯ: ಜನತಾ ದರ್ಶನದಲ್ಲಿ ಮೂರು ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಏಳು ಗಂಟೆಗಳ ಕಾಲ ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದೇನೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ಅರ್ಜಿಗಳು ಬಂದಿವೆ. ನಿವೇಶನ, ಮನೆ, ನಿರುದ್ಯೋಗ ಸಮಸ್ಯೆ ಬಗ್ಗೆಯೂ ಜನರಿಂದ ಮನವಿ ಸಲ್ಲಿಕೆಯಾಗಿವೆ. ವಿಕಲಚೇತನರ 40 ಅರ್ಜಿಗಳು ಬಂದಿವೆ. ಎಲೆಕ್ಟ್ರಿಕ್ ವೆಹಿಕಲ್ ಗೆ ಸಾಕಷ್ಟು ಬೇಡಿಕೆ ಇದೆ ಎಂದು ತಿಳಿಸಿದ್ದಾರೆ.
ಸಮುದಾಯದ ಬಗ್ಗೆ ಕೂಡ ಅರ್ಜಿ ಕೊಟ್ಟಿದ್ದಾರೆ. ಅರ್ಜಿಗಳನ್ನು ಬೇರ್ಪಡಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿದ್ದೇವೆ. ಈ ಬಗ್ಗೆ ಅಧಿಕಾರಿಗಳು ಮತ್ತು ನಾನು ಗಮನಹರಿಸುತ್ತೇವೆ. ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಎರಡರಿಂದ ಮೂರು ತಿಂಗಳು ಕಾಲಾವಕಾಶ ಬೇಕು. ನಾನು ಕೆಲಸ ಕೊಡಿಸುವ ಬಗ್ಗೆ ಅನೇಕರಿಗೆ ಭರವಸೆ ಇದೆ ಹೆಚ್.ಡಿ.ಕೆ. ಹೇಳಿದ್ದಾರೆ.