HomeIndiaಹತ್ರಾಸ್ ಕಾಲ್ತುಳಿತ: ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ವಶಕ್ಕೆ

ಹತ್ರಾಸ್ ಕಾಲ್ತುಳಿತ: ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ವಶಕ್ಕೆ

ಲಖನೌ: ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ, ಬೋಧಕ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾನ ನಿಕಟವರ್ತಿ ದೇವಪ್ರಕಾಶ್ ಮಧುಕರ್ ಶರಣಾಗಿದ್ದಾನೆ. ಆತನನ್ನು ಉತ್ತರ ಪ್ರದೇಶ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಮಧುಕರ್ ಅವರ ವಕೀಲ ಎಪಿ ಸಿಂಗ್, ಮಧುಕರ್ ಅವರು ನಜಾಫ್‌ಗಢದಲ್ಲಿ ದೆಹಲಿ ಪೊಲೀಸರಿಗೆ ಶರಣಾದರು, ನಂತರ ಅವರನ್ನು ಯುಪಿ ಪೊಲೀಸರಿಗೆ ಹಸ್ತಾಂತರಿಸಿದರು ಎಂದು ಹೇಳಿದ್ದಾರೆ.

ಮಧುಕರ್ ಮೇಲೆ ಬಹುಮಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧುಕರ್ ಬಂಧನದ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. 121 ಜನರನ್ನು ಬಲಿತೆಗೆದುಕೊಂಡ ಕಾಲ್ತುಳಿತದ ನಂತರ ಅವರು ಓಡಿಹೋಗಿದ್ದರು. ಉತ್ತರ ಪ್ರದೇಶ ಪೊಲೀಸರು ರಾಜಸ್ಥಾನ, ದೆಹಲಿ ಮತ್ತು ಹರಿಯಾಣ ಸೇರಿದಂತೆ ನೆರೆಯ ರಾಜ್ಯಗಳಲ್ಲೂ ಶೋಧ ಕೈಗೊಂಡಿದ್ದರು.

ಅಧಿಕಾರಿಗಳು ಬೋಧಕ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಅವರನ್ನು ವಿಚಾರಣೆಗಾಗಿ ಹುಡುಕುತ್ತಿದ್ದಾರೆ. ಜುಲೈ 2 ರಂದು ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಭೋಲೆ ಬಾಬಾ ಅವರ ಸತ್ಸಂಗದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಏಳು ಮಂದಿಯನ್ನು ಬಂಧಿಸಲಾಗಿದೆ. ಎಫ್‌ಐಆರ್‌ನಲ್ಲಿ ದೇವ್ ಪ್ರಕಾಶ್ ಮಧುಕರ್ ಅವರನ್ನು ಪ್ರಾಥಮಿಕ ಆರೋಪಿ ಎಂದು ಹೆಸರಿಸಲಾಗಿದ್ದು, ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರನ್ನು ಉಲ್ಲೇಖಿಸಿಲ್ಲ. ಹತ್ರಾಸ್‌ನಲ್ಲಿರುವ ಸಿಕಂದರಾ ರಾವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular