alex Certify ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಎನ್.ಆರ್. ಪುರ ಠಾಣೆ ಪೊಲೀಸರು 72 ವರ್ಷ ವಯಸ್ಸಿನ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಿದ್ದಾರೆ.

ನಿವೃತ್ತಿಯ ನಂತರವೂ ಗುತ್ತಿಗೆ ಆಧಾರದಲ್ಲಿ ಶಿಕ್ಷಕ ಕಾರ್ಯನಿರ್ವಹಿಸುತ್ತಿದ್ದರು. ಆಟದ ವಸ್ತುಗಳನ್ನು ಬೇರೆ ಕಡೆಗೆ ಇಡಲು ಕ್ರೀಡಾ ಕೊಠಡಿಗೆ ಕರೆದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...