alex Certify ಡಾ.ಬಾಬು ಜಗಜೀವನ ರಾಮ್ ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ; ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾ.ಬಾಬು ಜಗಜೀವನ ರಾಮ್ ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಡಾ.ಬಾಬು ಜಗಜೀವನರಾಮ್ ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿ ಅಂಗವಾಗಿ ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ. ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಕೈಚಾಚಬೇಕಾದ ಪರಿಸ್ಥಿತಿ ಇತ್ತು. ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಮ್ ಅವರು ಆಹಾರ ಭದ್ರತೆಯನ್ನು ಒದಗಿಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಗಜೀವನರಾಮ್ ಅವರು ರಕ್ಷಣಾ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದರೂ ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ. ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಮ್ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಈ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಸಹ ಈ ಭವನದಲ್ಲಿ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...