HomeKarnatakaBIG NEWS: ಡ್ರಗ್ಸ್, ಬೆಟ್ಟಿಂಗ್, ಇಸ್ಪೀಟ್ ನಿಲ್ಲದಿದ್ದರೆ SP, IG ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಲಾಗುವುದು:...

BIG NEWS: ಡ್ರಗ್ಸ್, ಬೆಟ್ಟಿಂಗ್, ಇಸ್ಪೀಟ್ ನಿಲ್ಲದಿದ್ದರೆ SP, IG ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: SP, DCP, IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಾಳೆಯಿಂದಲೇ ಈ ಕ್ರಮ ಕಡ್ಡಾಯವಾಗಿ ಜಾರಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದ ಬಳಿಕ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು‌ IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. SP-IG ಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಎಚ್ಚರಿಸಿದರು.

ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೇಕ್ ನ್ಯೂಸ್ ಪ್ರಸಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಡ್ರಗ್ಸ್ ಮಾರಾಟ ಇನ್ನೂ ನಿಂತಿಲ್ಲ. ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು? ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತದೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದರು.

ಪೊಲೀಸರಿಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ? ರೌಡಿಗಳಿಗೆ ಪೊಲೀಸ್ ಭಯ ಇರಬೇಕು ಎಂದು ಎಚ್ಚರಿಸಿದರು. ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಿ ಎಂದು ಇದೇ ವೇಳೆ ಸಲಹೆ ನೀಡಿದರು.

ಇನ್ನು ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂಧಿಸಿದರು.‌

For Latest News Updates, Join Our Whatsapp Community🚩
RELATED ARTICLES

Most Popular