alex Certify BIG NEWS : ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ ; ಗೌರವಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅಸ್ತು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ ; ಗೌರವಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅಸ್ತು..!

ಬಳ್ಳಾರಿ : ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳಕರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಡಿಯಂ ರಸ್ತೆಯ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಶೋಧೆಯು ಶ್ರೀಕೃಷ್ಣನನ್ನು ಹೇಗೆ ಬೆಳೆಸುತ್ತಾಳೆಯೋ, ಅದರಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳಕರ್ ಅವರು ಹೇಳಿದರು.

ಒಂದು ಹೆಣ್ಣು ಮನೆ ಬೆಳಗುತ್ತಾಳೆ ಮತ್ತು ಸಮಾಜವನ್ನು ಬೆಳೆಸುತ್ತಾಳೆ. ಚುನಾವಣೆ, ಪಲ್ಸ್-ಪೆÇಲೀಯೋ, ಮನೆ ಸಮೀಕ್ಷೆ, ಮುಖ್ಯವಾಗಿ ಕೊರೊನಾ ಸಂದರ್ಭದಲ್ಲಿ ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಗಣನೀಯ ಸೇವೆ ನೀಡಿದ್ದಾರೆ. ಸಮಾಜದಲ್ಲಿ ಅತ್ಯಂತ ಪ್ರಮುಖ ಸೇವೆ ನೀಡುವ ಇಲಾಖೆ ನಮ್ಮದು ಎಂದರೆ ತಪ್ಪಾಗಲಾರದು ಎಂದು ಹೇಳಿದರು.

ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು.

ಅಂಗನವಾಡಿಗಳ ಉನ್ನತೀಕರಣ

ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.

ಕಳಪೆ ಆಹಾರ ಪೂರೈಕೆಯಾದಲ್ಲಿ ಗಮನಕ್ಕೆ ತನ್ನಿ

ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳ ಗುಣಮಟ್ಟತೆ ಕಾಯ್ದುಕೊಳ್ಳಬೇಕು. ಆಹಾರ ಸಾಮಾಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಕಂಡುಬಂದಲ್ಲಿ ಗಮನಕ್ಕೆ ತರಬೇಕು. ಇಲ್ಲವಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲಾಡಳಿತವು ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಿಂದ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ವಿತರಿಸಲಾಗುತ್ತಿದೆ. ಇದೊಂದು ಪ್ರಶಂಸನೀಯ ಕಾರ್ಯವಾಗಿದ್ದು, ಜಿಲ್ಲಾಧಿಕಾರಿಯವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.

 

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...