alex Certify BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

ವಿಜಯಪುರ: ವಿಜಯಪುರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಿಗ್ಗೆ ಕಾರ್ಖಾನೆ ಕಾರ್ಮಿಕರು ಚಹಾ ಕುಡಿಯಲೆಂದು ಕಾರ್ಖಾನೆಯಿಂದ ಹೊರಬಂದಿದ್ದರು. ಈ ವೇಳೆ ಬಾಯ್ಲರ್ ಸ್ಫೋಟಗೊಂಡಿದೆ. ಇದರಿಂದ ಕಾರ್ಮಿಕರು ಸ್ವಲ್ಪದರಲ್ಲಿಯೇ ಬಚಾವಾಗಿದ್ದಾರೆ.

ಕಳೆದ 2023ರ ಮಾರ್ಚ್ 4ರಂದು ಕೂಡ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟಗೊಂಡಿತ್ತು. ದುರಂತದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.ಇದೀಗ ಮತ್ತೆ ಬಾಯ್ಲರ್ ಸ್ಫೋಟಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...