ಡೆಂಗ್ಯೂ ಪ್ರಕರಣ ಹೆಚ್ಚಳ: ಕಟ್ಟುನಿಟ್ಟಿನ ಗೈಡ್ ಲೈನ್ಸ್ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರೊಯಾಂಕ್ ಖರ್ಗೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಾರ್ಗಸೂಚಿ ಹೊರಡಿಸಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಕ್ರಮಕ್ಕೆ ಸೂಚಿಸಿದ್ದಾರೆ.

ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳನ್ನು ಸ್ವಚ್ಛಗೊಳಿಸುತ್ತಿರಬೇಕು. ಸಾರ್ವಜನಿಕ ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡಬೇಕು.

ನೀರು ಶೇಖರಣೆ ತೊಟ್ಟಿಗಳನ್ನು ವಾರಕ್ಕೆ ಒಮ್ಮೆ ಸ್ವಚ್ಚಗೊಳಿಸಬೇಕು.
ಗ್ರಾಮೀಣ ಭಾಗದ ಅಂಗಡಿ, ಮುಗ್ಗಟ್ಟುಗಳು, ಮನೆಗಳು, ಹೋಟೆಲ್, ವಾಣಿಜ್ಯ ಸಂಕಿರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನಿಲ್ಲದಂತೆ ಕ್ರಮವಹಿಸಬೇಕು.

ಆವರಣಗಳು ಸ್ವಚ್ಛವಾಗಿರುವಂತೆ ಕ್ರಮ ವಹಿಸಬೇಕು.
ನಿರುಪಯುಕ್ತ ತ್ಯಾಜ್ಯ ವಸ್ತಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವರೈ ಮಾಡಬೆಕು.

ಶಾಲಾ-ಕಾಲೇಜು, ವಸತಿ ಶಾಲೆಗಳ ಮೇಲ್ಛಾವಣಿಗಳು, ಆವರಣಗಳಲ್ಲಿ ನೀರು ಸಂಗ್ರಹವಾಗದಂತೆ, ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಗದಂತೆ ಕ್ರಮವಹಿಸಬೇ

ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳಲ್ಲಿ ನೀರು ನಿಲ್ಲದಂತೆ ಗುಂಡಿಗಳು ಹಾಗೂ ತಗ್ಗುಗಳನ್ನು ಮುಚ್ಚಬೇಕು.

ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ನೀರು ಸರಾಗವಾಗಿ ಹರಿಯುವಂತೆ ಸೂಕ್ತವಾದ ಚರಂಡಿ ವ್ಯವಸ್ಥೆ ಮಾಡಬೇಕು.
ಚರಂಡಿಗಳಲ್ಲಿನ ಹೂಳು ಎತ್ತಿ, ಚರಂಡಿಗಳು ಸ್ವಚ್ಚವಾಗಿರುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.

ಪ್ರಮುಖವಾಗಿ ಕುಡಿಯುವ ನೀರು ಪೂರೈಕೆಯಾಗುವ ನಳಗಳಿಗೆ ಕಂಟ್ರೋಲ್ ವಾಲ್ಸ್ ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read