HomeKarnataka4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

ಬೆಂಗಳೂರು: ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಬಾಲಕನ ಮುಖ, ಕೈಗಳನ್ನು ಗಾಯಗೊಳಿಸಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಈ ಘಟನೆ ನಡೆದಿದೆ. ನಾಲ್ಕು ವರ್ಷದ ಬಾಲಕ ಅವಾಜ್ ಭಾಷಾ ಎಂಬ ಬಾಲಕನ ಮೇಲೆ ಬೀದಿನಾಯಿಗಖು ದಾಳಿ ಮಾಡಿವೆ. ಬಾಲಕನ ಮುಖ, ಕೈಗಳನ್ನು ಗಾಯಗೊಳಿಸಿವೆ. ಬೀದಿನಾಯಿಗಳ ದಾಳಿ ಕಂಡು ತಕ್ಷಣ ಸ್ಥಳೀಯರು ಬಾಲಕನನ್ನು ರಕ್ಷಿಸಿದ್ದಾರೆ.

ಗಾಯಾಳು ಬಾಲಕನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular