HomeKarnatakaBIG NEWS: ಡೆಂಘೀ ಸೋಂಕಿಗೆ 13 ವರ್ಷದ ಬಾಲಕ ಬಲಿ

BIG NEWS: ಡೆಂಘೀ ಸೋಂಕಿಗೆ 13 ವರ್ಷದ ಬಾಲಕ ಬಲಿ

ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನ ಸಾವು-ನೋವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಡೆಂಗ್ಯೂ ಮಹಾಮಾರಿಗೆ ಇದೀಗ ಮತ್ತೋರ್ವ ಬಾಲಕ ಬಲಿಯಾಗಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ 13 ವರ್ಷದ ಬಾಲಕ ಡೆಂಗ್ಯೂ ಸೋಂಕಿನಿಂದ ಸಾವನ್ನಪ್ಪಿದ್ದಾನೆ. ಪ್ರೇಮ್ ಕುಮಾರ್ ಮೃತ ಬಾಲಕ.

ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ರಾಣೆಬೆನ್ನೂರು ಆರೋಗ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆಯಷ್ಟೇ ಗದಗದಲ್ಲಿ 5 ವರ್ಷದ ಬಾಲಕ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಬೆನ್ನಲ್ಲೇ ಇದೀಗ ಹಾವೇರಿಯಲ್ಲಿಯೂ ಬಾಲಕ ಡೆಂಗ್ಯೂ ಸೋಂಕಿಗೆ ಬಲಿಯಾಗಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular