ಬೈಕ್ ನಲ್ಲಿ ಬಂದು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿ: ಬೆಂಗಳೂರಿನಲ್ಲಿ ಕಾಮುಕನ ವಿಕೃತಿ

ಬೆಂಗಳೂರು: ರಾಜಧಾನಿ ಬೆಂಗಳೂರು ವಿದ್ಯಾರ್ಥಿನಿಯರು, ಮಹಿಳೆಯರಿಗೆ ದಿನದಿಂದ ದಿನಕ್ಕೆ ಅಸುರಕ್ಷಿತ ಎಂಬ ಭೀತಿ ಎದುರಾಗುತ್ತಿದೆ. ಪದೇ ಪದೇ ಇಂತಹ ಘಟನೆಗಳು ಬೆಳಕಿಗೆ ಬರುತ್ತಲೇ ಇದೆ. ಕಾಮುಕನೊಬ್ಬ ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡಿ ಪರಾರಿಯಾಗಿರುವ ಘಟನೆ ವಿ.ವಿ.ಪುರಂನಲ್ಲಿ ನಡೆದಿದೆ.

ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ, ಬೈಕ್ ನಲ್ಲಿ ಬರುವ ಕಾಮುಕನೊಬ್ಬ ಮುಖಕ್ಕೆ ಬಟ್ಟೆಕಟ್ಟಿಕೊಂಡು ಬೈಕ್ ನಲ್ಲಿ ಬಂದು ದುರ್ವರ್ತನೆ ತೋರಿದ್ದಾನೆ.

ಬೈಕ್ ನಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ ಕಾಮುಕನೊಬ್ಬ, ವಿ.ವಿ.ಪುರಂ ರಸ್ತೆಯಲ್ಲಿ ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದಾನೆ. ವಿದ್ಯಾರ್ಥಿನಿಯರು ಓಡಾಡುವ ಕಡೆಯೇ ಬೈಕ್ ನಿಲ್ಲಿಸಿ ಇಂತಹ ಅಸಭ್ಯವರ್ತನೆ ಮೆರೆದು ಬೈಕ್ ಹತ್ತಿ ಪರಾರಿಯಾಗುತ್ತಾನೆ.

ಕಾಮುಕನ ವಿಕೃತಿ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿದ್ಯಾರ್ಥಿನಿಯರು ವಿ.ವಿ.ಪುರಂ ಪೊಲೀಸರಿಗೆ ದೂರು ನೀಡಿದ್ದು, ಕ್ರಾಮುಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read