alex Certify BIG NEWS : ರಾಜ್ಯದಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್..!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿ ಮಾಡಲು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವಂತೆ ಸರ್ಕಾರಿ ನೌಕರರು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಕೂಡ ಭರವಸೆ ನೀಡಿದ್ದರು. ಆದರೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ವೇತನ ಪರಿಷ್ಕರಣೆ ಬಗ್ಗೆ ಯಾವುದೇ ನಿರ್ಧಾರ ಹೊರ ಬಿದ್ದಿರಲಿಲ್ಲ.

ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಒಂದೇ ದಿನದಲ್ಲಿ ಎಲ್ಲವನ್ನು ಜಾರಿಗೆ ತರಲು ಸಾಧ್ಯವಿಲ್ಲ, ತಾಳ್ಮೆಯಿಂದ ಇರಿ ಎಂದು ಅವರು ಮನವಿ ಮಾಡಿದರು.

7ನೇ ವೇತನ ಆಯೋಗ ಶಿಫಾಸು ಜಾರಿಗೆ ತರಲು ಸರ್ಕಾರಕ್ಕೆ 18,0000 ಸಾವಿರ ಕೋಟಿ ಬೇಕು. ಇದರ ಜತೆಗೆ ಒಪಿಎಸ್ ಜಾರಿಗೆ ಸಹ ನೂರಾರು ಕೋಟಿ. ಬೇಕು. ಹಾಗಾಗಿ ಒಂದೇ ದಿನದಲ್ಲಿ ಎಲ್ಲವನ್ನು ಜಾರಿಗೆ ತರಲು ಸಾಧ್ಯವಿಲ್ಲ. ನಾವು ಯಾರಿಗೂ ಮೋಸ ಮಾಡಲ್ಲ, ತಾಳ್ಮೆಯಿಂದ ಇರಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಾಕ್ಷ್ಯಗಳ ಸಂಗ್ರಹವಾಗಿದ್ದು, ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.ಕೊಲೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಅಗತ್ಯವು ಇಲ್ಲ, ಪೊಲೀಸರು ತನಿಖೆ ನಡೆಸಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...