HomeKarnataka'BPL CARD' ನಿರೀಕ್ಷೆಯಲ್ಲಿದವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ! ಶೀಘ್ರವೇ ಹೊಸ ಕಾರ್ಡ್ ವಿತರಣೆ

‘BPL CARD’ ನಿರೀಕ್ಷೆಯಲ್ಲಿದವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ! ಶೀಘ್ರವೇ ಹೊಸ ಕಾರ್ಡ್ ವಿತರಣೆ

ಬೆಂಗಳೂರು : BPL Card ನಿರೀಕ್ಷೆಯಲ್ಲಿದವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಹೊಸ ಕಾರ್ಡ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ ಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಕೆಲವು ಮಹತ್ವದ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ. ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು. ಅಭ್ಯರ್ಥಿಗಳಿಗೆ ಸಕಾಲದಲ್ಲಿ ಸಿಂಧುತ್ವ ಪ್ರಮಾಣ ಪತ್ರ ನೀಡದೆ ಇದ್ದರೆ ಅವರ ಭವಿಷ್ಯ ಹಾಳಾಗುವುದಿಲ್ಲವೇ ?ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸದೆ ಬಾಕಿ ಉಳಿದಿರುವ ಪಂಪ್ ಸೆಟ್ಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಒದಗಿಸಬೇಕು  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular