HomeKarnatakaBIG NEWS: ಮುಂದುವರೆದ ವ್ಯಾಪಕ ಮಳೆ; ಈ ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ಇಂದು ಕೂಡ...

BIG NEWS: ಮುಂದುವರೆದ ವ್ಯಾಪಕ ಮಳೆ; ಈ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ಇಂದು ಕೂಡ ರಜೆ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರಿ ಮಳೆಯಾಗುತ್ತಿರುವ ಕಾರಣ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.

ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು, ರಸ್ತೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ವಾಹನ ಸಂಚಾರ ಕಷ್ಟಕರವಾಗಿದೆ. ಇದರ ಮಧ್ಯೆ ಹವಾಮಾನ ಇಲಾಖೆ ಮಂಗಳವಾರ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ – ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರ ಮಂಗಳವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular