HomeCrimeBREAKING NEWS: ಬೆಳ್ಳಂಬೆಳಿಗ್ಗೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

BREAKING NEWS: ಬೆಳ್ಳಂಬೆಳಿಗ್ಗೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದವನನ್ನು ಶಿವಮೊಗ್ಗ ಪೊಲೀಸರು ಬಂಧಿಸಲು ಮುಂದಾದ ವೇಳೆ ಆತ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಇಂದು ಬೆಳಗ್ಗೆ ಶಿವಮೊಗ್ಗ ಬಿ ಉಪ ವಿಭಾಗದ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಜಾಕ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ.

ರಜಾಕ್ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಈತನನ್ನು ಇಂದು ಹೊಳೆಹೊನ್ನೂರು ಠಾಣೆಯ ಇನ್ಸ್ಪೆಕ್ಟರ್ ಲಕ್ಷ್ಮಿಪತಿ ಮತ್ತವರ ತಂಡ ಬಂಧಿಸಲು ಹೋದ ವೇಳೆ ಪೊಲೀಸ್ ಸಿಬ್ಬಂದಿ ಅರ್ಜುನ್ ಎಂಬವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಆಗ ಇನ್ಸ್ಪೆಕ್ಟರ್ ಲಕ್ಷ್ಮೀಪತಿ ಆತನ ಕಾಲಿಗೆ ಗುಂಡು ಹಾರಿಸಿ ಗಾಯಗೊಳಿಸಿದ್ದು ಆರೋಪಿಯನ್ನು ಇದೀಗ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular