HomeKarnatakaದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್; ಆರೋಪಿಗಳ ವಾಹನಗಳ ಬಗ್ಗೆ RTOಗೆ ಪತ್ರ...

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್; ಆರೋಪಿಗಳ ವಾಹನಗಳ ಬಗ್ಗೆ RTOಗೆ ಪತ್ರ ಬರೆದ ಪೊಲೀಸರು

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೊಲೆ ವೇಳೆ ಆರೋಪಿಗಳು ಬಳಸಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈವರೆಗೆ ಪೂಲೀಸರು ಆರೋಪಿಗಳಿಂದ 9 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಾರು, ಬೈಕ್ ಗಳು ಸೇರಿದಂತೆ 9 ವಾಹನಗಳನ್ನು ವಶಕ್ಕೆ ಪಡೆದು, ಇದರ ಮೂಲ ಮಾಲೀಕರು ಯಾರು ಎಂಬ ಬಗ್ಗೆ ಪೊಲೀಸರು ಪರುಶೀಲನೆ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ವಾಹನಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪೊಲೀಸರು ಆರ್ ಟಿಒ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular