HomeKarnatakaBREAKING NEWS: ಬಿಎಂಟಿಸಿ ಬಸ್ ನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

BREAKING NEWS: ಬಿಎಂಟಿಸಿ ಬಸ್ ನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ನಡೆದಿದೆ.

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಿಎಂಟಿಸಿ ಬಸ್ ನ ಕೆಳ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ಷಣದಲ್ಲೇ ಬೆಂಕಿ ಬಸ್ ತುಂಬೆಲ್ಲ ವ್ಯಾಪಿಸಿದ್ದು, ನಡುರಸ್ತೆಯಲ್ಲೇ ಬಸ್ ಧಗ ಧಗನೆ ಹೊತ್ತಿ ಉರಿದಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular