ಬೆಂಗಳೂರು : ಆರೋಗ್ಯ ಇಲಾಖೆಯು ಜನರಲ್ಲಿ ಡೆಂಘಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಇಜಿಪ್ತಿ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯ ನಡೆಸುತ್ತಿದೆ.
ಹೆಚ್ಚು ಡೆಂಘಿ ಪ್ರಕರಣಗಳು ಕಂಡುಬರುವ ಸ್ಥಳಗಳಲ್ಲಿ ಜ್ವರ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಸೂಚಿಸಲಾಗಿದೆ. ಔಷಧಿಗಳ ಲಭ್ಯತೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರು ಹೆಚ್ಚು ಜಾಗರೂಕರಾಗಿ ಡೆಂಘಿ ಹರಡದಂತೆ ಎಚ್ಚರಿಕೆ ವಹಿಸಬೇಕು” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.