alex Certify ದಿನಪತ್ರಿಕೆ ವಿತರಕರು ವಿಮೆಗೆ ನೋಂದಾಯಿಸುವುದು ಹೇಗೆ..! ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿನಪತ್ರಿಕೆ ವಿತರಕರು ವಿಮೆಗೆ ನೋಂದಾಯಿಸುವುದು ಹೇಗೆ..! ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ʼಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆʼಯನ್ನು ಜಾರಿಗೆ ತಂದಿದೆ.

ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ನೋಂದಣಿ ಹೇಗೆ..? ಏನೆಲ್ಲಾ ದಾಖಲೆ ಬೇಕು..? ಇಲ್ಲಿದೆ ಮಾಹಿತಿ

ಯೋಜನೆಯ ಉದ್ದೇಶ

ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ.

ನೋಂದಣಿ ವಿಧಾನ:

ಇ-ಕ್ರಮ್ ಪೋರ್ಟಲ್ www.eshram.gov.inನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಗಳು, ಬಾಪೂಜಿ ಸೇವಾ ಕೇಂದ್ರಗಳು, ಅಂಚೆ ಕಛೇರಿಗಳು ಹಾಗೂ ಕರ್ನಾಟಕ ಬನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳುವುದು.

ಇತರೆ ಮಾಹಿತಿ

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು, ಯೋಜನೆಯಡಿ ನಿಗದಿಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಕಾರ್ಮಿಕ ಅಧಿಕಾರಗಳ ಕಛೇರಿ/ ಹಿರಿಯ ಕಾರ್ಮಿಕ/ಕಾರ್ಮಿಕ ನಿರೀಕ್ಷಕರುಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಿ ಸೌಲಭ್ಯವನ್ನು ಪಡೆಯಬಹುದಾಗಿದೆ.

ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆ:-

ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
16 ರಿಂದ 59 ವಯೋಮಾನದವರಾಗಿರಬೇಕು.
ಕೇಂದ್ರ ಸರ್ಕಾರದ ಇ-ಶ್ರಮ್ ಪೋರ್ಟಲ್ನಲ್ಲಿ “News Paper Boy” ಎಂಬ ವರ್ಗದಡಿ ನೋಂದಣಿಯಾಗಿರಬೇಕು.
ಆದಾಯ ತೆರಿಗೆ ಪಾವತಿದಾರರಾಗಿರಬಾರದು.
ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.

ಅವಶ್ಯಕ ದಾಖಲೆಗಳು

ಆಧಾರ್ಕಾರ್ಡ್.
ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ.
ಬ್ಯಾಂಕ್ಖಾತೆ ವಿವರಗಳು.

ದೊರಕುವ ಸೌಲಭ್ಯಗಳು

ಅಪಘಾತದಿಂದ ಮರಣ ಹೊಂದಿದಲ್ಲಿ ರೂ. 2.00 ಲಕ್ಷ, 0 ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ (ಶೇಕಡವಾರು ದುರ್ಬಲತೆ ಆಧಾರದಮೇಲೆ).

ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಕಾರ್ಮಿಕ ಸಹಾಯವಾಣಿ 155214 (24×7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯಕಾರ್ಮಿಕ ನಿರೀಕ್ಷಕರು / ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...