ಬೆಂಗಳೂರು : ಕೆ-ಸೆಟ್ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜು.11 ರಿಂದ ದಾಖಲೆ ಪರಿಶೀಲನೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದೆ.
KSET-23 ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ಅರ್ಹ ಅಭ್ಯರ್ಥಿಗಳ ಪಟ್ಟಿ (https://cetonline.karnataka.gov.in/kea/kset2023) ಆಧರಿಸಿ ಜುಲೈ 11ರಿಂದ 22ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ kea ವೆಬ್ ಸೈಟ್ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.