HomeKarnatakaBREAKING : ವಾಲ್ಮೀಕಿ ನಿಗಮ ಹಗರಣ ಕೇಸ್ ; ಮಾಜಿ ಸಚಿವ ನಾಗೇಂದ್ರ ಪಿ.ಎ E.D...

BREAKING : ವಾಲ್ಮೀಕಿ ನಿಗಮ ಹಗರಣ ಕೇಸ್ ; ಮಾಜಿ ಸಚಿವ ನಾಗೇಂದ್ರ ಪಿ.ಎ E.D ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿಂತೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ದಾಳಿ ನಡೆಸಿದ ಬಳಿಕ ಮಾಜಿ ಸಚಿವ ಬಿ. ನಾಗೇಂದ್ರ ಪಿಎ  ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  ನಾಗೇಂದ್ರ ಪಿಎ ಹರೀಶ್ ಅವರನ್ನು  ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ಮನೆ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ , ನಾಗೇಂದ್ರ ಫ್ಲ್ಯಾಟ್ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ..ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular