ಕುರುಗೋಡು ಪುರಸಭೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಅನುದಾನ ಅಡಿ ಕುರುಗೋಡು ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಬಿ.ಇ, ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲ್ಯಾಪ್ಟ್ಯಾಪ್ ಖರೀದಿಸಲು ಸಹಾಯಧನ ಮತ್ತು ರಾಜ್ಯ, ರಾಷ್ಟ್ರೀಯ ಮಟ್ಟದ ಕಲೆ, ಸಾಂಸ್ಕøತಿಕ ಹಾಗೂ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸಿದವರಿಗೆ ಪ್ರೋತ್ಸಾಹಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಜು.26 ರೊಳಗಾಗಿ ಅರ್ಜಿ ಸಲ್ಲಿಸಬೇಕು.
*ಬೇಕಾದ ದಾಖಲೆ
ಆಧಾರ್ ಕಾರ್ಡ್ ನಕಲು ಪ್ರತಿ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫಲಾನುಭವಿಯ ಭಾವಚಿತ್ರ, ಹಿಂದಿನ ಸಾಲಿನ ಎಲ್ಲಾ ಸೆಮಿಸ್ಟರ್ ಅಥವಾ ವರ್ಷಗಳ ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ, ನೋಂದಣಿ ರಸೀದಿ, ಕ್ರೀಡೆಯಲ್ಲಿ ಭಾಗವಹಿಸಿದ್ದರೆ ಸಂಬಂಧಿಸಿದ ಪ್ರಮಾಣ ಪತ್ರ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಅಥವಾ ದೂ.08393-263166 ಗೆ ಸಂಪರ್ಕಿಸಬಹುದು ಕುರುಗೋಡು ಪುರಸಭೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಅನುದಾನ ಅಡಿ ಕುರುಗೋಡು ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಬಿ.ಇ, ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಲ್ಯಾಪ್ಟ್ಯಾಪ್ ಖರೀದಿಸಲು ಸಹಾಯಧನ ಮತ್ತು ರಾಜ್ಯ, ರಾಷ್ಟ್ರೀಯ ಮಟ್ಟದ ಕಲೆ, ಸಾಂಸ್ಕತಿಕ ಹಾಗೂ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸಿದವರಿಗೆ ಪ್ರೋತ್ಸಾಹಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.