ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ವಿಶೇಷವಾಗಿ ಕುಮಾವೂನ್ ಪ್ರದೇಶದ ಮೇಲೆ ಪರಿಣಾಮ ಬೀರಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಅಪಾಯವನ್ನು ಹೆಚ್ಚಿಸಿದೆ.
ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಪರ್ವತ ಪ್ರದೇಶಗಳಲ್ಲಿ ಭೂಕುಸಿತಗಳು ಸಂಭವಿಸುತ್ತಿದ್ದು, ಜನರು ಮನೆಯೊಳಗೆ ಇರುವಂತೆ ಸೂಚನೆ ನೀಡಲಾಗಿದೆ. ಉತ್ತರಾಖಂಡದಲ್ಲಿ ನೋಡ ನೋಡುತ್ತಿದ್ದಂತೆ ಭೂಮಿ ಕುಸಿದಿದ್ದು, ವಿಡಿಯೋ ವೈರಲ್ ಆಗಿದೆ. ಇಲ್ಲಿ ನದಿ ಮಟ್ಟ ಏರಿಕೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ರಕ್ಷಣಾ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.