HomeKarnatakaBREAKING : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; ವರ್ಗಾವಣೆ ಅವಧಿ ವಿಸ್ತರಣೆ ಮಾಡಿ ರಾಜ್ಯ...

BREAKING : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; ವರ್ಗಾವಣೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವರ್ಗಾವಣೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ.ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 15.07.2024 ರವರೆಗೆ ವಿಸ್ತರಿಸಿ ಆದೇಶಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular