ಸ್ಯಾಂಡಲ್ವುಡ್ ನ ಬೇಡಿಕೆಯ ನಟಿ ಬೃಂದಾಚಾರ್ಯ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ತಮ್ಮ ಸಿನಿಮಾ ಸಂಭದಿತ ವಿಚಾರ ಸೇರಿದಂತೆ ದಿನಕ್ಕೊಂದು ಫೋಟೋಗಳನ್ನು ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಬೃಂದಾ ಆಚಾರ್ಯ ಕೆಂಪು ಸೀರೆಯನ್ನು ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರಿಂದ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ.
ಸಿನಿಮಾ ವಿಚಾರಕ್ಕೆ ಬಂದರೆ 2021 ರಲ್ಲಿ ತೆರೆ ಕಂಡ ‘ಪ್ರೇಮಂ ಪೂಜ್ಯಂ’ ನಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಜೊತೆ ಅಭಿನಯಿಸುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು ಕಳೆದ ವರ್ಷ ‘ಜೂಲಿಯಟ್ 2’ ಹಾಗೂ ‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದರು. ಇತ್ತೀಚಿಗೆ ‘ರೀತು’ ಶೂಟಿಂಗ್ನಲ್ಲಿ ನಿರತರಾಗಿದ್ದಾರೆ.