HomeKarnatakaಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ರಾಜ್ಯ ಸರ್ಕಾರದಿಂದ ಉಚಿತ 'NEET' ತರಬೇತಿ..!

ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ರಾಜ್ಯ ಸರ್ಕಾರದಿಂದ ಉಚಿತ ‘NEET’ ತರಬೇತಿ..!

ಶಿವಮೊಗ್ಗ : ಎಲ್ಲ ಪೋಷಕರಿಗೆ ತಮ್ಮ ಮಕ್ಕಳಿಗೆ ನೀಟ್ ತರಬೇತಿ ಕೊಡಿಸುವುದು ಸಾಧ್ಯವಿಲ್ಲ. ಅತಿ ದುಬಾರಿ, ಆದ್ದರಿಂದ ರಾಜ್ಯ ಸರ್ಕಾರ ಹೊಸ ಯೋಜನೆ ಜಾರಿಗೆ ತಂದು ಮೊದಲ ಹಂತದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ ನೀಡಲಿದೆ. ಈ ಯೋಜನೆ ಮುಂದಿನ ವರ್ಷದಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಹಾಗೂ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಥಿಲಾವಸ್ಥೆಯಲ್ಲಿ ಇರುವ ಶಾಲಾ ಕಟ್ಟಡ ಮತ್ತು ಕೊಠಡಿಗಳನ್ನು ಹಂತ ಹಂತವಾಗಿ ರಿಪೇರಿ ಮಾಡಲಾಗುತ್ತಿದೆ. 1600 ಕೊಠಡಿ ರಿಪೇರಿ ಮತ್ತು ಅವಶ್ಯವಿರುವೆಡೆ ಹೊಸ ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲೇ ಮಂಜೂರಾತಿ ದೊರೆಯಲಿದೆ. ರಾಜ್ಯದಲ್ಲಿ ಹೊಸದಾಗಿ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉನ್ನತೀಕರಿಸಲಾಗುವುದು ಎಂದು ಹೇಳಿದ್ದ ಪ್ರಕಾರ ಹಂತ ಹಂತವಾಗಿ ಕೆಪಿಎಸ್ ಶಾಲೆ ಉನ್ನತೀಕರಣ ಆಗುತ್ತಿದೆ. ಕೆಪಿಎಸ್ ಶಾಲೆಯಲ್ಲಿ ಕನ್ನಡ, ಇಂಗ್ಲಿಷ್ ಮಾಧ್ಯಮ, ಎಲ್ಕೆಜಿ, ಯುಕೆಜಿ, ಲೈಬ್ರರಿ ಸೇರಿದಂತೆ ಉತ್ತಮ ಸೌಲಭ್ಯಗಳು ದೊರೆಯಲಿದ್ದು 500 ರಿಂದ 1 ಸಾವಿರ ಕೆಪಿಎಸ್ ಶಾಲೆಗಳನ್ನು ತೆರೆಯುವ ಮತ್ತು 10 ಲಕ್ಷ ಮಕ್ಕಳು ಓದುವ ಗುರಿ ಹೊಂದಲಾಗಿದೆ. ಮುಂದಿನ ವರ್ಷ 3 ಲಕ್ಷ ವಿದ್ಯಾರ್ಥಿಗಳು ಇಲ್ಲಿ ಓದುವ ಗುರಿ ಹೊಂದಲಾಗಿದೆ.

ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸಲಾಗುವುದು. ಡಿಡಿಪಿಐ, ಬಿಇಓ ಗಳು ಈ ಕಡೆ ಹೆಚ್ಚಿನ ಗಮನ ನೀಡಬೇಕು. ಶಾಲಾ ಹಾಜರಾತಿ ಕುರಿತು ಸುಳ್ಳು ಹೇಳುವಂತಿಲ್ಲ. ಸ್ಯಾಟ್ಸ್ ತಂತ್ರಾಂಶವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು. ಸರ್ಕಾರಿ ಶಾಲೆಯಲ್ಲೇ ಅತ್ಯುತ್ತಮ ಶಿಕ್ಷಕರಿದ್ದು ಉತ್ತಮ ಫಲಿತಾಂಶ ನೀಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಓದಿನಲ್ಲಿ ಹಿಂದುಳಿದ ಮಕ್ಕಳಿಗೆ ಸಂಜೆ ಪಾಠ ವ್ಯವಸ್ಥೆ ಮಾಡಿದಲ್ಲಿ ಫಲಿತಾಂಶ ಹೆಚ್ಚಲಿದೆ. ರಾಜ್ಯದ ಎಲ್ಲ ಶಾಲೆಗಳಲ್ಲಿ ಶೇ.100 ಫಲಿತಾಂಶ ಬರಬೇಕು. ಹೆಮ್ಮೆಯಿಂದ ಸರ್ಕಾರಿ ಶಾಲೆಗೆ ಮಕ್ಕಳು ಬರುವಂತೆ ಆಗಬೇಕು ಎಂದರು.

ಪ್ರಸ್ತುತ ಎಲ್ಲ ಪೋಷಕರಿಗೆ ತಮ್ಮ ಮಕ್ಕಳಿಗೆ ನೀಟ್ ತರಬೇತಿ ಕೊಡಿಸುವುದು ಸಾಧ್ಯವಿಲ್ಲ. ಅತಿ ದುಬಾರಿ, ಆದ್ದರಿಂದ ರಾಜ್ಯ ಸರ್ಕಾರ ಹೊಸ ಯೋಜನೆ ಜಾರಿಗೆ ತಂದು ಮೊದಲ ಹಂತದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ತರಬೇತಿ ನೀಡಲಿದೆ. ಈ ಯೋಜನೆ ಮುಂದಿನ ವರ್ಷದಿಂದ ಜಾರಿಗೆ ಬರಲಿದೆ.

ಹಂತ ಹಂತವಾಗಿ ಶಿಕ್ಷಕರ ನೇಮಕಾತಿ ಮಾಡಲಾಗುವುದು. ಈ ವರ್ಷ ಸುಮಾರು 10 ಸಾವಿರ ಸರ್ಕಾರಿ ಶಿಕ್ಷಕರ ನೇಮಕ ಮಾಡಲಾಗುವುದು. ಅನುದಾನಿತ ಶಾಲೆಗಳಿಗೂ 2020 ರಿಂದ ಮಂಜೂರಾತಿ ನೀಡಲು ಮತ್ತು ಅವರ ಅಭಿವೃದ್ದಿಗಾಗಿ ಪ್ರಯತ್ನಿಸಲಾಗುವುದು ಎಂದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular