alex Certify ಚನ್ನಪಟ್ಟಣದಿಂದ ಯೋಗೇಶ್ವರ್ ಸ್ಪರ್ಧೆ ಖಚಿತ: ಯಾವ ಪಕ್ಷದಿಂದ ಅನ್ನೋದೇ ಸಸ್ಪೆನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚನ್ನಪಟ್ಟಣದಿಂದ ಯೋಗೇಶ್ವರ್ ಸ್ಪರ್ಧೆ ಖಚಿತ: ಯಾವ ಪಕ್ಷದಿಂದ ಅನ್ನೋದೇ ಸಸ್ಪೆನ್ಸ್

ರಾಮನಗರ: ಚನ್ನಪಟ್ಟಣದ ಉಪ ಚುನಾವಣೆಗೆ ಎನ್.ಡಿ.ಎ. ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರ ಬಳಿ ನಾವು ಚರ್ಚೆ ನಡೆಸುತ್ತೇವೆ. ನೀವೇ ಅಭ್ಯರ್ಥಿಯಾಗಬೇಕು ಎಂದು ತಾಕೀತು ಮಾಡಿದ್ದಾರೆ. ನಾನು ನಮ್ಮ ನಾಯಕರ ಬಳಿಯೂ ಚರ್ಚಿಸುತ್ತೇನೆ. ಮುಂದಿನ ತೀರ್ಮಾನ ರಾಜ್ಯದ ನಾಯಕರು ಕೈಗೊಳ್ಳುತ್ತಾರೆ. ಜೆಡಿಎಸ್ ಕಾರ್ಯಕರ್ತರೇ ಸಭೆ ನಡೆಸಿದ್ದಾರೆ. ಅಂದ ಮೇಲೆ ಈ ಬಗ್ಗೆ ಜೆಡಿಎಸ್ ಪಕ್ಷದ ವರಿಷ್ಠರೇ ತೀರ್ಮಾನ ಮಾಡಲಿ ಎಂದು ಹೇಳಿದ್ದಾರೆ.

ಬಿಜೆಪಿಯವರು ಬಿಜೆಪಿಯಿಂದ ಸ್ಪರ್ಧೆ ಮಾಡಿ ಎನ್ನುತ್ತಿದ್ದಾರೆ. ಜೆಡಿಎಸ್ ಸ್ಥಳೀಯ ಮುಖಂಡರು ಜೆಡಿಎಸ್ ನಿಂದ ಸ್ಪರ್ಧಿಸಿ ಎನ್ನುತ್ತಿದ್ದಾರೆ. ಎಲ್ಲವೂ ಕುಮಾರಸ್ವಾಮಿಯವರ ಮೇಲಿದೆ ಎಂದು ಹೇಳಿದ್ದಾರೆ.

ನನ್ನ ಅಭ್ಯರ್ಥಿ ಮಾಡ್ತಾರೆ ಎನ್ನುವ ವಿಶ್ವಾಸ ಇದ್ದೇ ಇದೆ. ಆದರೂ, ಬಿಜೆಪಿ -ಜೆಡಿಎಸ್ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಷಯ ವಿಚಾರ ಇದಾಗಿದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...