HomeIndiaಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: 5 ಕೆಜಿ ಆಹಾರಧಾನ್ಯ ಉಚಿತ ಯೋಜನೆ ಮುಂದುವರಿಕೆ

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: 5 ಕೆಜಿ ಆಹಾರಧಾನ್ಯ ಉಚಿತ ಯೋಜನೆ ಮುಂದುವರಿಕೆ

ನೋಯ್ಡಾ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಪ್ರಕಾರ 80 ಕೋಟಿ ಜನರಿಗೆ ಪ್ರತಿ ತಿಂಗಳು  5 ಕೆ.ಜಿ ಆಹಾರ ಧಾನ್ಯ ಉಚಿತವಾಗಿ ನೀಡಲಾಗುತ್ತದೆ. ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗರೀಬಿ ಹಠಾವೊ, ರೋಟಿ ಕಪಡಾ ಔರ್ ಮಖಾನ್ ಎನ್ನುವ ಘೋಷಣೆಗಳನ್ನು ಹಿಂದಿನ ಸರ್ಕಾರ ಹೊಂದಿತ್ತು. ಆದರೆ, ಈ ದೇಶದಲ್ಲಿ ಈಗಲೂ 80 ಕೋಟಿ ಜನ ಐದು ಕೆಜಿ ಆಹಾರ ಧಾನ್ಯ ಪಡೆಯುತ್ತಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದ 13.5 ಜನ ಬಡತನದಿಂದ ಹೊರಬರಲು ಸಾಧ್ಯವಾಗಿದೆ. ನಾವು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆಜಿ ಆಹಾರಧಾನ್ಯ ನೀಡುತ್ತೇವೆ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular