HomeKarnataka1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರವಿಡೀ ಮೊಟ್ಟೆ ವಿತರಣೆ

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರವಿಡೀ ಮೊಟ್ಟೆ ವಿತರಣೆ

ಶಿವಮೊಗ್ಗ: ರಜಾ ದಿನ ಹೊರತುಪಡಿಸಿ ವಾರದ ಆರು ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

‌ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ, ಶೇಕಡ 100ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಸ್ಥರನ್ನು ಅಭಿನಂದಿಸಿ ಅವರು ಮಾತನಾಡಿದರು.

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ ಆರು ದಿನವೂ ಮೊಟ್ಟೆ ವಿತರಿಸಲಾಗುವುದು. ಈ ಮೊದಲು ಎಂಟನೇ ತರಗತಿವರೆಗಿನ ಮಕ್ಕಳಿಗೆ ವಾರದಲ್ಲಿ ಒಮ್ಮೆ ಮಾತ್ರ ಮೊಟ್ಟೆ ವಿತರಿಸಲಾಗುತ್ತಿತ್ತು. ಅದನ್ನು 10ನೇ ತರಗತಿವರೆಗೆ ವಿಸ್ತರಿಸಿದ್ದು, ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ಮೊಟ್ಟೆ ವಿತರಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular