ಶಿವಮೊಗ್ಗ: ಮುಂದಿನ ವರ್ಷದಿಂದ ರಾಜ್ಯ ಸರ್ಕಾರವೇ ನೀಟ್ ತರಬೇತಿಯನ್ನು ಉಚಿತವಾಗಿ ನೀಡಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಪಡೆದ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಶೇಕಡ 100ರಷ್ಟು ಫಲಿತಾಂಶ ಪಡೆದ ಶಾಲೆಗಳ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಮುಂದಿನ ವರ್ಷದಿಂದ ರಾಜ್ಯ ಸರ್ಕಾರವೇ 20 ಸಾವಿರ ವಿಧ್ಯಾರ್ಥಿಗಳಿಗೆ ಉಚಿತವಾಗಿ ನೀಡ್ ತರಬೇತಿ ನೀಡಲಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅವರನ್ನು ಆಯ್ಕೆ ಮಾಡಿ ನೀಟ್ ತರಬೇತಿ ನೀಡಲಾಗುತ್ತದೆ. ಮಕ್ಕಳಿಗೆ ನೀಟ್ ತರಬೇತಿ ಕೊಡಿಸುವುದು ಹೆಚ್ಚಿನ ಪೋಷಕರಿಗೆ ಸಾಧ್ಯವಾಗುತ್ತಿಲ್ಲ. ನೀಟ್ ತರಬೇತಿ ಕೊಡಿಸುವುದು ಅತಿ ದುಬಾರಿಯಾಗಿದ್ದು, ಹೀಗಾಗಿ ಸರ್ಕಾರವೇ ಮಕ್ಕಳಿಗೆ ತರಬೇತಿ ಕೊಡಿಸಲಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.