ಮೈಸೂರು : ವಿವಿಧ ಹಗರಣಗಳ ವಿರುದ್ಧ ಸಿಡಿದೆದ್ದ ಬಿಜೆಪಿ ಇಂದು ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮುಡಾ’ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ. ತನಿಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪ ಇರದಂತೆ ಸಿಬಿಐಗೆ ವಹಿಸಬೇಕು. ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ.
ರಾಜ್ಯದ ಸರ್ಕಾರದ ಬಹುಕೋಟಿ ಹಗರಣ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ತೆರಳಲಿರುವ ಬಿಜೆಪಿ ಮುಖಂಡರ ಮನೆಗಳ ಮುಂದೆ ಪೊಲೀಸರನ್ನು ನಿಯೋಜಿಸಿ @BJP4Karnataka ಹೋರಾಟ ಹತ್ತಿಕ್ಕಲು ಹೊರಟಿದೆ @siddaramaiah ಅವರ ರಣಹೇಡಿ ಕಾಂಗ್ರೆಸ್ ಸರ್ಕಾರ.
ಸಿಎಂ @siddaramaiah ಅವರೇ ಇದು ನಿಮ್ಮ ಅಸಲೀ ಮುಖವಾಡವೇ? ಬಡವರಿಗೆ ಹಂಚಬೇಕಿರುವ… pic.twitter.com/rp1G5aJFVu
— BJP Karnataka (@BJP4Karnataka) July 12, 2024

