alex Certify WATCH : ಶಿವಣ್ಣನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ‘ಭೈರತಿ ರಣಗಲ್’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WATCH : ಶಿವಣ್ಣನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ‘ಭೈರತಿ ರಣಗಲ್’ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು : ನಟ ಶಿವರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಸಿಕ್ಕಿದ್ದು, ಭೈರತಿ ರಣಗಲ್ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಭೈರತಿ ರಣಗಲ್ ಕನ್ನಡ ಭಾಷೆಯ ನಿಯೋ-ನಾಯರ್ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾಗಿದ್ದು, ಇದನ್ನು ನರ್ತನ್ ನಿರ್ದೇಶಿಸಿದ್ದಾರೆ ಮತ್ತು ಗೀತಾ ಪಿಕ್ಚರ್ಸ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಶಿವ ರಾಜ್ಕುಮಾರ್ ಮತ್ತು ರಾಹುಲ್ ಬೋಸ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರೆ, ರುಕ್ಮಿಣಿ ವಸಂತ್ , ದೇವರಾಜ್ , ಛಾಯಾ ಸಿಂಗ್ , ಮಧು ಗುರುಸ್ವಾಮಿ , ವಸಿಷ್ಟ ಎನ್. ಸಿಂಹ , ಶಬೀರ್ ಕಲ್ಲರಕ್ಕಲ್ ಮತ್ತು ಬಾಬು ಹಿರಣ್ಣಯ್ಯ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಸಿನಿಮಾ ಬಹಳ ಕುತೂಹಲ ಕೆರಳಿಸಿದೆ. ಟೀಸರ್ ನಲ್ಲಿ ಶಿವಣ್ಣ ಮಾಸ್ ಡೈಲಾಗ್ ಮೂಲಕ ಅಬ್ಬರಿಸಿದ್ದಾರೆ. ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...