ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ ಪ್ರಸ್ತಕ ಸಾಲಿನ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ (20+1) ಅಡಿ ನಿಗಮದಲ್ಲಿ ನೋಂದಣಿಯಾಗಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರುವವರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬಳ್ಳಾರಿ ಜಿಲ್ಲೆಗೆ ನಿಗದಿಯಾದ 77 ಗುರಿಗಳಲ್ಲಿ ಪರಿಶಿಷ್ಟ ಜಾತಿ 12, ಪರಿಶಿಷ್ಟ ಪಂಗಡ 04, ಅಲ್ಪಸಂಖ್ಯಾತ 12, ಅಂಗವಿಕಲ 03 ಹಾಗೂ ಸಾಮಾನ್ಯ ವರ್ಗದ 46 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಹೊಸಪೇಟೆ, ವಿಜಯನಗರ ಜಿಲ್ಲೆ ಹಾಗೂ ಹತ್ತಿರದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದಿಂದ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಂಬಂಧಿಸಿದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಗೆ ನೀಡಬೇಕು.
ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.