alex Certify BREAKING NEWS: ಜೂ.25 ನ್ನು ‘ಸಂವಿಧಾನ ಹತ್ಯಾ’ ದಿನವನ್ನಾಗಿ ಘೋಷಿಸಿದ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜೂ.25 ನ್ನು ‘ಸಂವಿಧಾನ ಹತ್ಯಾ’ ದಿನವನ್ನಾಗಿ ಘೋಷಿಸಿದ ಕೇಂದ್ರ ಸರ್ಕಾರ

ಮಾಜಿ ಪ್ರಧಾನಿ ಇಂದಿರಾಗಾಂಧಿಯವರು 1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರ ಜೂನ್ 25ನ್ನು ‘ಸಂವಿಧಾನ ಹತ್ಯಾ’ ದಿನವನ್ನಾಗಿ ಘೋಷಿಸಿದೆ. ಅಂದು ಈ ಕರಾಳ ದಿನವನ್ನು ನೆನೆದು ಇಂತಹ ದಿನಗಳು ಮತ್ತೆ ಮರುಕಳಿಸದಿರಲಿ ಎಂದು ಪ್ರಾರ್ಥಿಸಲಾಗುತ್ತದೆ.

ಕೇಂದ್ರ ಗೃಹ ಸಚಿವ ಅಮಿತ್‌ ಷಾ ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟ್ವೀಟ್‌ ಮಾಡಿದ್ದು, ಜೂನ್‌ 25, 1975 ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ತಮ್ಮ ಸರ್ವಾಧಿಕಾರತ್ವವನ್ನು ಪ್ರದರ್ಶಿಸಿದ್ದರು. ಈ ಮೂಲಕ ಮಾಧ್ಯಮ ಸೇರಿದಂತೆ ಎಲ್ಲರ ಧ್ವನಿ ಅಡಗಿಸಿದ್ದರು. ಇಂತಹ ಕರಾಳ ದಿನವನ್ನು ಈಗ ಸಂವಿಧಾನ ಹತ್ಯಾ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಪ್ರತಿ ವರ್ಷ ಜೂನ್ 25ರಂದು ತುರ್ತು ಪರಿಸ್ಥಿತಿ ವಿರೋಧಿಸಿ ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸುವುದರ ಜೊತೆಗೆ ತುರ್ತು ಪರಿಸ್ಥಿತಿ ಕಾರಣಕ್ಕೆ ಉದ್ಭವಿಸಿದ ಸಮಸ್ಯೆಗಳನ್ನು ಸಹ ನೆನೆಯಲಾಗುತ್ತದೆ.

— Amit Shah (@AmitShah) July 12, 2024

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...