ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ತೇಲುವ ಸೌರ ವಿದ್ಯುತ್ ಫಲಕ ಅಳವಡಿಸಲು ಸರ್ಕಾರ ನಿರ್ಧರಿಸಿದೆ.
ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ 100 ಕ್ಕೂ ಹೆಚ್ಚು ಎಕರೆ ವಿಸ್ತೀರ್ಣ ಹೊಂದಿರುವ 40 ಕೆರೆಗಳನ್ನು ಗುರುತಿಸಲಾಗಿದೆ. ಈ ಕೆರೆಗಳು ಸುಮಾರು 10 ಸಾವಿರ ಎಕರೆ ಪ್ರದೇಶ ವ್ಯಾಪ್ತಿಯನ್ನು ಹೊಂದಿದ್ದು, ಸುಮಾರು 2,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. ಈ ಕೆರೆಗಳಲ್ಲಿ ತೇಲುವ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.