ನಿನ್ನೆಯ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ಎದುರು 86 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಮತ್ತೊಂದೆಡೆ ಪಾಕಿಸ್ತಾನ ತಂಡ ಕೂಡ ವೆಸ್ಟ್ ಇಂಡೀಸ್ ಎದುರು ಕೆಲವೇ ಅಂತರದಿಂದ ರೋಚಕ ಜಯ ಕಂಡಿದ್ದು, ಫೈನಲ್ ಪ್ರವೇಶಿಸಿದೆ.
ಇಂದು ಫೈನಲ್ ಪಂದ್ಯ ನಡೆಯುತ್ತಿತ್ತು, ಭಾರತ ಹಾಗೂ ಪಾಕಿಸ್ತಾನ ಮುಖಮುಖಿಯಾಗುತ್ತಿವೆ. ಭಾರತ ಹಾಗೂ ಪಾಕಿಸ್ತಾನ ಪಂದ್ಯವೆಂದರೆ ಎಲ್ಲಾ ರೀತಿಯ ಕ್ರಿಕೆಟ್ನಲ್ಲೂ ಜಿದ್ದಾಜಿದ್ದಿ ಹೋರಾಟ ಇದ್ದೇ ಇರುತ್ತದೆ.
ಇದೀಗ ಮಾಜಿ ಕ್ರಿಕೆಟಿಗರ ವರ್ಲ್ಡ್ ಚಾಂಪಿಯನ್ ಶಿಪ್ ಆಫ್ ಲೆಜೆಂಡ್ಸ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಫೈನಲ್ ನಡೆಯುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದುವರೆಗೂ ಕೇವಲ ಒಂದೇ ಒಂದು ಪಂದ್ಯದಲ್ಲಿ ಸೋಲು ಕಂಡಿರುವ ಪಾಕಿಸ್ತಾನ ತಂಡಕ್ಕೆ ಬೆವರಿಳಿಸಲು ಇಂದು ಯುವರಾಜ್ ಸಿಂಗ್ ಪಡೆ ಸಜ್ಜಾಗಿದೆ.