alex Certify BIG NEWS : ಕಾವೇರಿ ನದಿ ನೀರಿನ ವಿವಾದ ; ನಾಳೆ ಸಂಜೆ 4 ಗಂಟೆಗೆ ಸರ್ವಪಕ್ಷಗಳ ಸಭೆ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಾವೇರಿ ನದಿ ನೀರಿನ ವಿವಾದ ; ನಾಳೆ ಸಂಜೆ 4 ಗಂಟೆಗೆ ಸರ್ವಪಕ್ಷಗಳ ಸಭೆ ನಿಗದಿ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿ ಬಿಡುವಂತೆ ಆದೇಶ ಹೊರಡಿಸಲಾಗಿದ್ದು, ರಾಜ್ಯದ ರೈತರು ಸಿಡಿದೆದ್ದಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಭಾರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಹಿನ್ನೆಲೆ ಜುಲೈ 14ನೇ ತಾರೀಖಿನ ಭಾನುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ” ಕಾವೇರಿ ನದಿ ನೀರಿನ” ಕುರಿತು ಸರ್ವಪಕ್ಷಗಳ ಸಭೆಯನ್ನು ಏರ್ಪಾಡು ಮಾಡಲಾಗಿದೆ.

ಸಭೆಗೆ ರಾಜ್ಯದ ಸರ್ವಪಕ್ಷಗಳ ಸದಸ್ಯರು, ಕೇಂದ್ರ ಸಚಿವರು, ಸಂಸತ್ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಾಗಿ ಕಾವೇರಿ ನೀರು ಹಂಚಿಕೆಯಲ್ಲಿ ಉದ್ಭವವಾಗಿರುವ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಸಲಹೆ ನೀಡಬೇಕೆಂದು ಕೋರುತ್ತೇನೆ. ಕರುನಾಡ ಜೀವನದಿ ಕಾವೇರಿಯ ರಕ್ಷಣೆಗಾಗಿ, ನಾಡಿನ ರೈತರ ಹಿತ ಕಾಯುವುದಕ್ಕಾಗಿ ನಿಮ್ಮೆಲ್ಲರ ಸಹಕಾರವಿರಲಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...