alex Certify ರಾಜ್ಯದಲ್ಲಿ ಇಂದು ಹೊಸದಾಗಿ 424 ಮಂದಿಗೆ ಡೆಂಗ್ಯೂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದು ಹೊಸದಾಗಿ 424 ಮಂದಿಗೆ ಡೆಂಗ್ಯೂ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 424 ಡೆಂಗ್ಯೂ ಪ್ರಕರಣ ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆ ಅವಧಿಯಲ್ಲಿ 202 ಡೆಂಗ್ಯೂ ಕೇಸ್ ಗಳು ದಾಖಲಾಗಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 9082ಕ್ಕೆ ಏರಿಕೆಯಾಗಿದೆ.

ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಶಂಕಿತ ಡೆಂಘೀಗೆ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಯತೀಶ್(50) ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ.

ಇದುವರೆಗೆ ಹಾಸನದಲ್ಲಿ 15 ವರ್ಷದೊಳಗಿನ ಆರು ಮಕ್ಕಳು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯಲ್ಲಿ ಇಬ್ಬರು, ಧಾರವಾಡದಲ್ಲಿ ಇಬ್ಬರು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ. ಹಾವೇರಿಯಲ್ಲಿ ಎರಡು, ಚಿಕ್ಕಮಗಳೂರು ಒಂದು, ಬೆಂಗಳೂರಿನಲ್ಲಿ ಒಂದು ಮಗು ಡೆಂಗ್ಯೂ ಜ್ವರದಿಂದ ಮೃತಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...