ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ಬಿಕೆಸಿಯಲ್ಲಿ ನಡೆದ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್, ರಾಧಿಕಾ ಅವರ ಮದುವೆ ಶುಭ ಆಶೀರ್ವಾದ ಸಮಾರಂಭದಲ್ಲಿ ಮೋದಿ ಭಾಗಿಯಾಗಿ ನವದಂಪತಿಗೆ ಶುಭ ಹಾರೈಸಿ ಆಶೀರ್ವದಿಸಿದ್ದಾರೆ.
ಪ್ರಧಾನ ಮಂತ್ರಿಗಳನ್ನು ಉದ್ಯಮಿ ಮುಕೇಶ್ ಅಂಬಾನಿ ಅವರು ಸ್ವಾಗತಿಸಿ ಸಮಾರಂಭದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಧಾನಿ ಮೋದಿ ಅವರು ಮುಕೇಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರೊಂದಿಗೆ ಮುಂದಿನ ಸಾಲಿನಲ್ಲಿ ಕುಳಿತಿದ್ದಾರೆ, ಇದಕ್ಕೂ ಮೊದಲು ಮದುವೆಗೆ ಬಂದ ಅತಿಥಿಗಳತ್ತ ಕೈಮುಗಿದು ನಮಸ್ಕರಿಸಿದ್ದಾರೆ.
https://twitter.com/bhansaligautam1/status/1812139624241758661
https://twitter.com/snehamordani/status/1812141370569867449