HomeIndiaBIG BREAKING: 46 ವರ್ಷಗಳ ನಂತರ ಪುರಿ ಜಗನ್ನಾಥ ದೇವಾಲಯ ರತ್ನ ಭಂಡಾರದ ರಹಸ್ಯ ಕೋಣೆ...

BIG BREAKING: 46 ವರ್ಷಗಳ ನಂತರ ಪುರಿ ಜಗನ್ನಾಥ ದೇವಾಲಯ ರತ್ನ ಭಂಡಾರದ ರಹಸ್ಯ ಕೋಣೆ ಓಪನ್

ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ ಓಪನ್ ಮಾಡಲಾಗಿದೆ. 46 ವರ್ಷಗಳ ನಂತರ ಅಧಿಕಾರಿಗಳು ರತ್ನ ಭಂಡಾರದ ರಹಸ್ಯ ಮನೆಯ ಬಾಗಿಲು ತೆರೆದಿದ್ದಾರೆ.

ಜಸ್ಟೀಸ್ ಬಿಶ್ವನಾಥನ್ ರಾತ್ ಸಮಿತಿ ಶಿಫಾರಸಿನಂತೆ 1978ರ ನಂತರ ರತ್ನ ಭಂಡಾರ ಬಾಗಿಲು ತೆರೆಯಲಾಗಿದೆ.

ಒಡಿಶಾ ಸರ್ಕಾರವು ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ದಾಸ್ತಾನುಗಳಿರುವ 12 ನೇ ಶತಮಾನದ ಪುರಿಯ ಜಗನ್ನಾಥ ದೇವಾಲಯದ ಪೂಜ್ಯ ಖಜಾನೆಯಾದ ರತ್ನ ಭಂಡಾರ್ ಅನ್ನು ಭಾನುವಾರ ತೆರೆದಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಜಾನೆಯಲ್ಲಿನ ಬೆಲೆಬಾಳುವ ವಸ್ತುಗಳ ದಾಸ್ತಾನು ಮೇಲ್ವಿಚಾರಣೆಗೆ ರಾಜ್ಯ ಸರ್ಕಾರ ರಚಿಸಿರುವ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಬಿಸ್ವನಾಥ್ ರಾತ್, ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ(ಎಸ್‌ಜೆಟಿಎ) ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧೀ ಸೇರಿದಂತೆ ಸಮಿತಿಯ ಸದಸ್ಯರು ಸೇರಿ ಹಲವರು ಉಪಸ್ಥಿತರಿದ್ದರು.

ಬೆಲೆಬಾಳುವ ವಸ್ತುಗಳನ್ನು ತಾತ್ಕಾಲಿಕವಾಗಿ ಇಡುವ ಸ್ಥಳವನ್ನೂ ಗುರುತಿಸಲಾಗಿದೆ ಎಂದು ಮಾಜಿ ಒಡಿಶಾ ಹೈಕೋರ್ಟ್ ನ್ಯಾಯಾಧೀಶರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular