ಬೆಂಗಳೂರು: ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ.
ಹಗರಣಗಳ ನಡುವೆ ಹಲವು ದಿನಗಳಿಂದ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ -ಜೆಡಿಎಸ್ ಮುಖಂಡರ ನಡುವೆ ಬಹಿರಂಗ ಆರೋಪ, ಪ್ರತ್ಯಾರೋಪಗಳು ಕೇಳಿ ಬರುತ್ತಿದ್ದು, ಸೋಮವಾರದಿಂದ ಆರಂಭವಾಗುವ ಕಲಾಪದಲ್ಲಿ ಮುಖಾಮುಖಿಯಾಗಲಿದ್ದಾರೆ.
ವಾಲ್ಮೀಕಿ ನಿಗಮ, ಮುಡಾ ಹಗರಣ, ಕಲುಷಿತ ನೀರು, ಬೆಲೆ ಏರಿಕೆ ಬಗ್ಗೆ ಪ್ರಸ್ತಾಪಿಸಲು ಪ್ರತಿಪಕ್ಷಗಳು ಸಜ್ಜಾಗಿದ್ದು, ಹಿಂದಿನ ಸರ್ಕಾರದ ಹಗರಣ ಪ್ರಸ್ತಾಪಿಸಿ ತಿರುಗೇಟು ಸರ್ಕಾರವೂ ರೆಡಿಯಾಗಿದೆ. ಲೋಕಸಭೆ ಚುನಾವಣೆಯ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಹಲವು ಹಗರಣಗಳು ಹೊರ ಬಂದಿರುವುದರಿಂದ ಕಾಂಗ್ರೆಸ್ ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.