ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು.
ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮದುವೆ ಮಾಡಿಸುವುದು ಕಾನೂನಿಗೆ ವಿರುದ್ಧವಾಗಿದೆ. ಬಾಲ್ಯ ವಿವಾಹವು ತಾಯಿ ಮತ್ತು ಶಿಶು ಮರಣ ಪ್ರಮಾಣ ಏರಿಕೆಯಾಗುವುದಕ್ಕೂ ಪ್ರಮುಖ ಕಾರಣವಾಗಿದೆ.ಎಲ್ಲಿಯೇ ಬಾಲ್ಯವಿವಾಹ ಕಂಡು ಬಂದರೂ ತಕ್ಷಣವೇ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ದೂರು ದಾಖಲಿಸಿ. ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಿ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.