ಬೆಂಗಳೂರು : ಪ್ರಯಾಣಿಕರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಕೆಎಸ್ ಆರ್ ಟಿಸಿ ಟಿಕೆಟ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಕೆಎಸ್ಆರ್ಟಿಸಿ ಸಹಿತ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್ ಪ್ರಯಾಣ ದರ ಏರಿಸುವ ಯಾವುದೇ ಚಿಂತನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಶೀಘ್ರವೇ ಕೆಎಸ್ ಆರ್ ಟಿಸಿ ಹಾಗೂ ವಿವಿಧ ನಿಗಮಗಳ ಬಸ್ ಗಳ ಟಿಕೆಟ್ ದರ ಹೆಚ್ಚಳವಾಗಲಿರುವ ಬಗ್ಗೆ ಸಾರಿಗೆ ಸಚಿವರು ಸುಳಿವು ನೀಡಿದ್ದರು. ಈ ಬೆನ್ನಲ್ಲೇ ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೆರೆ ಎಳೆದಿದ್ದಾರೆ.