HomeEntertainment'ದೇಸಾಯಿ' ಚಿತ್ರದ ವಿಡಿಯೋ ಗೀತೆ ರಿಲೀಸ್

‘ದೇಸಾಯಿ’ ಚಿತ್ರದ ವಿಡಿಯೋ ಗೀತೆ ರಿಲೀಸ್

ಕಳೆದ ತಿಂಗಳು ಬಿಡುಗಡೆಯಾಗಿದ್ದ ನಾಗಿ ರೆಡ್ಡಿ ಬಡ ನಿರ್ದೇಶನದ ‘ದೇಸಾಯಿ’ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದ್ದು, ನಟ ಪ್ರವೀಣ್ ಕುಮಾರ್ ಗೆ ‘ಲವ್ 360’ ಬಳಿಕ  ಮತ್ತೊಮ್ಮೆ ಭರ್ಜರಿ ಯಶಸ್ಸು ಸಿಕ್ಕಿದೆ. ದೇಸಾಯಿ ಚಿತ್ರದ ‘ಒಲವು ಮೂಡೋ ಕಾಲವು’ ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ  ಹಾಡಿಗೆ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್ ಧ್ವನಿಯಾಗಿದ್ದು, ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರವೀಣ್ ಕುಮಾರ್ ಗೆ ಜೋಡಿಯಾಗಿ ರಾಧ್ಯ ಅಭಿನಯಿಸಿದ್ದು, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ಪ್ರಶಾಂತ್, ಸೀತಾ ಬೆನಕ, ಆರತಿ ಕುಲಕರ್ಣಿ, ಮಂಜುನಾಥ್ ಹೆಗಡೆ, ಸೃಷ್ಟಿ, ಒರಟ ಪ್ರಶಾಂತ್, ಉಳಿದ ತಾರಾಂಗಣದಲ್ಲಿದ್ದಾರೆ. ಶ್ರೀ ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಬ್ಯಾನರ್ ನಲ್ಲಿ ಮಹಾಂತೇಶ ವಿ.ಚೋಳಚಗುಡ್ಡ ನಿರ್ಮಿಸಿದ್ದಾರೆ. ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಾಹಣವಿದ್ದು, ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular