ಮಹಿಳೆ ಮೇಲೆ ಆಟೋ ಚಾಲಕ ಸೇರಿ ಮೂವರಿಂದ ಗ್ಯಾಂಗ್ ರೇಪ್

ಹೈದರಾಬಾದ್: ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಮನೆಗೆ ಹಿಂದಿರುಗುತ್ತಿದ್ದ 29 ವರ್ಷದ ಮಹಿಳೆಯೊಬ್ಬರ ಮೇಲೆ ಹೈದರಾಬಾದ್‌ನಲ್ಲಿ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ನ ಚಾಲಕ ಮತ್ತು ಅವರ ಇಬ್ಬರು ಸಹಚರರಿಂದ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜುಲೈ 13 ರ ಮುಂಜಾನೆ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಪತಿ ವಿರುದ್ಧ ದೂರು ನೀಡಲು ಹೋಗಿದ್ದರು. ಮಹಿಳೆಯು ಕ್ಯಾಬ್-ಅಗ್ರಿಗೇಟರ್ ಮೂಲಕ ಆಟೋ-ರಿಕ್ಷಾವನ್ನು ಬುಕ್ ಮಾಡಿದ್ದರು.

ಆಟೋ ಡ್ರೈವರ್ ದೂರದ ಮಾರ್ಗದಲ್ಲಿ ಕರೆದುಕೊಂಡು ಹೋಗಿದ್ದು, ವೈನ್ ಶಾಪ್‌ ನಲ್ಲಿ ಮದ್ಯ ಸೇವಿಸುತ್ತಿದ್ದ ತನ್ನ ಇಬ್ಬರು ಸಹಚರರನ್ನು ಜೊತೆಗೆ ಕರೆದೊಯ್ದಿದ್ದಾನೆ. ಅವರು ಮಹಿಳೆಗೆ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾರೆ. ನಂತರ ವಾಹನವನ್ನು ನಿರ್ಜನ ಪ್ರದೇಶಕ್ಕೆ ಓಡಿಸಿದ್ದಾರೆ. ಅಲ್ಲಿ ಆಕೆಯನ್ನು ಬೆದರಿಸಿ ಕಾರ್ ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಮಹಿಳೆ ತಪ್ಪಿಸಿಕೊಂಡು ಮುಖ್ಯರಸ್ತೆ ತಲುಪಿದ್ದಾಳೆ. ನಂತರ 100ಕ್ಕೆ ಕರೆ ಮಾಡಿ ದೂರು ದಾಖಲಿಸಲು ಪೊಲೀಸರಿಗೆ ಕರೆ ಮಾಡಿದ್ದಾಳೆ. ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read