HomeKarnatakaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯದಿಂದಲೂ ಉಚಿತವಾಗಿ ಸಾರವರ್ಧಿತ ಅಕ್ಕಿ ವಿತರಣೆ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯದಿಂದಲೂ ಉಚಿತವಾಗಿ ಸಾರವರ್ಧಿತ ಅಕ್ಕಿ ವಿತರಣೆ

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ ನೀಡುತ್ತಿರುವಂತೆ ಸಾರವರ್ಧಿತ ಅಕ್ಕಿಯನ್ನು ರಾಜ್ಯದಿಂದಲೂ ವಿತರಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಡಾ. ಯತೀಂದ್ರ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರದಿಂದ ಸಾರವರ್ಧಿತ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರಸ್ತುತ ಗದಗ, ಕೊಪ್ಪಳ, ಹಾವೇರಿ, ರಾಯಚೂರು, ಶಿವಮೊಗ್ಗ ಸೇರಿ ಇತರೆ ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಿಸಲಾಗುತ್ತಿದೆ. ರಾಜ್ಯ ಸರ್ಕಾರದಿಂದಲೂ ಸಾರವರ್ಧಿತ ಅಕ್ಕಿ ಕೊಡುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದು ವಿಚಾರಿಸುವುದಾಗಿ ಹೇಳಿದ್ದಾರೆ.

ಡಾ. ಯತೀಂದ್ರ, ರಾಜ್ಯದಲ್ಲಿಯೂ ಸಾರವರ್ಧಿತ ಅಕ್ಕಿ ನೀಡಬೇಕು. ಕೇಂದ್ರ ಸರ್ಕಾರ ಎನ್‌ಎಫ್‌ಎಸ್ಎ ಫಲಾನುಭವಿಗಳಿಗೆ ಅಪೌಷ್ಟಿಕತೆ ನೀಗಿಸಲು ಫಾರ್ಟಿಫೈಡ್ ರೈಸ್ ನೀಡುತ್ತಿದೆ. ಅದೇ ರೀತಿ ರಾಜ್ಯ ಸರ್ಕಾರವೂ ನೀಡಬೇಕು ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular