HomeKarnatakaBIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಹೊನ್ನಾವರ-ಬೆಂಗಳೂರು ರಸ್ತೆ ಸಂಪೂರ್ಣ ಬಂದ್

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಹೊನ್ನಾವರ-ಬೆಂಗಳೂರು ರಸ್ತೆ ಸಂಪೂರ್ಣ ಬಂದ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚುತ್ತಿದ್ದು, ಮಳೆ ಅವಾಂತರಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಮೂರು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ನಿರಂತರ ಮಳೆಗೆ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಗುಡ್ಡ ಕುಸಿದಿದ್ದು, ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿವೆ. ರಸ್ತೆ ಮಾರ್ಗವೇ ಬಂದ್ ಆಗಿದೆ.

ಹೊನ್ನಾವರ ತಾಲೂಕಿನ ವರ್ನಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ಬೃಹತ್ ಬಂಡೆಗಳು, ಮಣ್ಣು, ಮರಗಳು ರಸ್ತೆ ಮೇಲೆ ಬಿದ್ದಿವೆ. ಹೊನ್ನಾವರ-ಸಾಗರ-ಬೆಂಗಳೂರು ರಸ್ತೆ ಸಂಪೂರ್ಣ ಬಂದ್ ಆಗಿದೆ. ಮುಂಜಾನೆಯಿಂದಲೇ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರಾಕಾರ ಮಳೆಯಿಂದಾಗಿ ಮಣ್ಣು, ಮರಗಳ ತೆರವು ಕಾರ್ಯಾಚರಣೆ ಕೂಡ ವಿಳಂಬವಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular