HomeKarnatakaಹೆಬ್ಬಾಳೆ ಸೇತುವೆ ಜಲಾವೃತ: ಹೊರನಾಡು-ಕಳಸ ಸಂಪರ್ಕ ಕಡಿತ

ಹೆಬ್ಬಾಳೆ ಸೇತುವೆ ಜಲಾವೃತ: ಹೊರನಾಡು-ಕಳಸ ಸಂಪರ್ಕ ಕಡಿತ

ಚಿಕ್ಕಮಗಳೂರು: ಧಾರಾಕಾರ ಮಳೆಯಿಂದಾಗಿ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವು ಪ್ರದೇಶಗಳು ಜಾಲಾವೃತಗೊಂಡಿವೆ. ಇನ್ನು ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿ ರಸ್ತೆ ಮಾರ್ಗಗಳೇ ಬಂದ್ ಆಗಿವೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಭದ್ರಾ ನದಿ ಅಪಾಯದಮಟ್ಟದಲ್ಲಿ ಹರಿಯುತ್ತಿದೆ. ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ರಸ್ತೆ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಇದರಿಂದಾಗಿ ಕಳಸ-ಹೊರನಾಡು ಸಂಪರ್ಕ ಕಡಿತಗೊಂಡಿದೆ.

ಹೆಬ್ಬಾಳೆ ಸೇತುವೆ ಮೇಲೆ ನದಿ ನೀರು ತುಂಬಿ ಹರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೇತುವೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ಸಂಚಾರ ನಿಷೇಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular