alex Certify BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ನೀಡಲಾಗಿದೆ.

ಚುನಾವಣೆ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ಹಾಗೂ ಮುಡಾ ಅಕ್ರಮ ವಿಚಾರವಾಗಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಚುನಾವಣಾ ಆಯೋಗಕ್ಕೆ ಈ ದೂರು ನೀಡಿದ್ದಾರೆ.

2018ರ ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯ ನೀಡಿದ್ದ ಅಫಿಡವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ ಎಂದು ನಮೂದಿಸಿದ್ದರು. ಆದರೆ 2005ರಲ್ಲಿಯೇ ಈ ಜಮೀನು ಪರಿವರ್ತನೆ ಮಾಡಿಸಿದ್ದಾಗಿ ದಾಖಲೆ ನೀಡಿ ದೂರು ಸಲ್ಲಿಸಲಾಗಿದೆ.

2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್ ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಲಾಗಿದೆ. 14 ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ಸಿದರಾಮಯ್ಯ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಮತ್ತೊಂದು ದೂರು ಸಲ್ಲಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...