ಬೆಂಗಳೂರು : ಆ. 1ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜು. 16ರಿಂದ ಆಗಸ್ಟ್ 1ರವರೆಗೆ ರಾಜ್ಯದಲ್ಲಿ ಮತ್ತಷ್ಟು ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ
ಜು. 16ರಿಂದ 24ರವರೆಗೆ ಕರಾವಳಿಯಲ್ಲಿ ಹಾಗೂ ಮಲೆನಾಡಿನ ಭಾಗದಲ್ಲಿ ಭಾರಿ ಮಳೆಯಾಗಲಿದೆ. ಜು. 24ರಿಂದ ಆ. 1ರ ನಡುವೆ, ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಕೊಪ್ಪ, ಕಳಸ, ನರಸಿಂಹರಾಜಪುರ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸೇರಿ ಹಲವು ಕಡೆ ಜು. 16ರಿಂದ 24ರವರೆಗಿನ ಅವಧಿಯಲ್ಲಿ 150 ಮಿ.ಮೀ.ನಷ್ಟು ಮಳೆಯಾಗಬಹುದು ಎಂದು ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.